ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.



