WEATHER | ರಾಜ್ಯದಲ್ಲಿ ಮುಂದುವರಿದ ಒಣಹವೆ, ಅಲ್ಲಲ್ಲಿ ಮಾತ್ರ ಗುಡುಗು ಸಹಿತ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಅಲ್ಲಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗಲಿದೆ. ಇನ್ನೂ ಐದು ದಿನ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.