February 4, 2026
Wednesday, February 4, 2026
spot_img

WEATHER | ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿದ್ದು, ಇಂದೂ ಸಹ ಅದೇ ಹವಾಮಾನ ಮುಂದುವರಿ ಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ಇದೇ ಹವಾಮಾನವಿರಲಿದ್ದು, ನಂತರ ಲಘು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣವಿರಲಿದೆ.

ಇದನ್ನೂ ಓದಿ: ದಿನಭವಿಷ್ಯ: ಈ ರಾಶಿಯವರಿಗೆ ಕೆಲಸವೂ ಸುಲಭ, ಹಣದ ಸಂಕಷ್ಟವೂ ಇಲ್ಲ

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !