Sunday, January 25, 2026
Sunday, January 25, 2026
spot_img

WEATHER | ರಾಜ್ಯದೆಲ್ಲೆಡೆ ಇಂದೂ ಒಣ ಹವೆಯ ಮುನ್ಸೂಚನೆ, ಬೆಂಗಳೂರಿನಲ್ಲಿ ಮಂಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ, ಬೀದರ್ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಹಲವು ದಿನಗಳಿಂದ ಮಂಜು ಕವಿದ ವಾತಾವರಣವಿದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 16.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read