ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ. ರಾಜ್ಯದಲ್ಲಿ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿದ್ದು, ಒಣಹವೆ ಎಲ್ಲೆಡೆ ಇದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.



