May 5, 2026
Tuesday, May 5, 2026
spot_img

WEATHER | ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !