May 26, 2026
Tuesday, May 26, 2026
spot_img

WEATHER | ರಾಜ್ಯದ ಜಿಲ್ಲೆಗಳಲ್ಲಿ ಒಣಹವೆ, ಬಿಸಿಲು: ಬೆಂಗಳೂರಂತೂ ಧಗಧಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಿಸಿಲು ನೆತ್ತಿಗೇರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಅತಿಯಾದ ಬಿಸಿಲು ಇರಲಿದೆ.

ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !