ಹಾಡಹಗಲೇ ಡಿಎಸ್ಎಸ್ ಮುಖಂಡನ ಕೊಚ್ಚಿ ಕೊಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಎಸ್ಎಸ್ ಮುಖಂಡ ನರಸಿಂಹಮೂರ್ತಿ (45) ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಗುಬ್ಬಿ ಪಟ್ಟಣದ ಬಿ.ಎಸ್.ರಸ್ತೆಯಲ್ಲಿ ಘಟನೆ ನಡೆದಿದೆ.
ಡಿಎಸ್ಎಸ್ ತಾಲ್ಲೂಕು ಸಂಚಾಲಕನಾಗಿದ್ದ ನರಸಿಂಹ ಮೂರ್ತಿ, ಮಧ್ಯಾಹ್ನ ಟೀ ಅಂಗಡಿ ಮುಂದೆ ಕುಳಿತಿದ್ದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದು, ಡಿಎಸ್ಎಸ್ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!