ಹೊಸದಿಗಂತ ವರದಿ ಮಂಡ್ಯ :
ಕಾಂಗ್ರೆಸ್ ಪಕ್ಷದಲ್ಲಿ ಕೇವಲ ದುಡ್ಡು ಇರುವವರಿಗೆ ಮಾತ್ರ ಟಿಕೆಟ್ ನೀಡುತ್ತಾರೆ ಎಂಬುದು ಶುದ್ಧ ಸುಳ್ಳು. ದುಡ್ಡು ಇರೋರೂ ಸಹ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ಚಂದ್ರು) ತಿಳಿಸಿದರು.
ತಾಲೂಕಿನ ಕೆರಗೋಡಿನಲ್ಲಿ ನಡೆದ ಪಂಚಲಿಂಗೋತ್ಸವ ಕಾರ‌್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಕೇವಲ ಹಣ ಇದ್ದೋರಿಗೆ ಮಾತ್ರ ಟಿಕೆಟ್ ಎನ್ನುವುದು ಸರಿಯಲ್ಲ. ಹಣ ಇರುವವರೆಲ್ಲರೂ ಗೆಲ್ಲಲು ಸಾಧ್ಯವೂ ಇಲ್ಲ. ಇದಕ್ಕೆ ಜನ ಬೆಂಬಲ ಇದ್ದಾಗಮಾತ್ರ ಗೆಲುವು ಸಾಧ್ಯ ಎಂದು ಡಾ. ರವೀಂದ್ರ ಆರೋಪಕ್ಕೆ ತಿರುಗೇಟು ನೀಡಿದರು.
ಪಕ್ಷದ ಸ್ಥಳೀಯ ನಾಯಕರು, ವರಿಷ್ಠರು ನನ್ನನ್ನು ನಂಬಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.