ಹೊಸದಿಗಂತ ವರದಿ ಮಂಗಳೂರು:
ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಭಾನುವಾರ ತಡರಾತ್ರಿಯಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಬೆಳಗ್ಗೆ ಐದು ಗಂಟೆ ಬಳಿಕ ಮಳೆಯ ತೀವ್ರತೆ ಕಡಿಮೆಯಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಮುಂದುವರೆದಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.