ಭಾರೀ ಮಳೆಗೆ ಹಾಸನದ ವಿವಿಧೆಡೆ ಜಲದಿಗ್ಬಂಧನ: ಜಲಾವೃತ ಪ್ರದೇಶದತ್ತ ಶಾಸಕರ ದೌಡು!

ಹೊಸದಿಗಂತ ವರದಿ ಹಾಸನ:

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬಡಾವಣೆಗಳಿಗೆ ನೀರು ನುಗ್ಗಿ ಜಲದಿಗ್ಬಂದನಗೊಂಡ ವಿವಿಧ ಬಡಾವಣೆಗಳಿಗೆ ಇಂದು ಬೆಳ್ಳಂಬೆಳಗ್ಗೆ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಾಲಕ್ಷ್ಮಿ ಲೇಔಟ್, ಹಾಸನಂಬ ಬಡಾವಣೆ, ಉದ್ದೂರು ಹೀಗೆ ಹಲವು ಬಡಾವಣೆಗಳಲ್ಲಿ ನೀರು ತುಂಬಿ ಜಲಾವೃತಗೊಂಡಿದ್ದು ಇದರಿಂದ ಬಡಾವಣೆ ನಿವಾಸಿಗಳು ಹೊರಬರಲಾರದೆ ಪರದಾಡುವಂತೆ ಆಗಿದೆ. ಅಲ್ಲದೆ ರಸ್ತೆಗಳು ಕೂಡ ಸಂಪೂರ್ಣವಾಗಿ ಜಲಾವೃತವಾಗಿ ವಿವಿಧಡೆ ಸಂಪರ್ಕ ಕಡಿತಗೊಂಡಿದೆ.

ಕೆಲವೆಡೆ ಅಪಾಯದ ಮಟ್ಟ ಮೀರಿ ಹರಿಯುತ್ತಿವ ಕೆರೆಗಳಿಂದ ಕೆರೆಗಳು ಕೊಡಿ ಬಿದ್ದು ರಸ್ತೆಯ ಮೇಲೆ ನೀರು ಹರಿಯುತ್ತಿರುವ ಕಾರಣ ರಸ್ತೆ ಸಂಪರ್ಕ ಕಡಿತಗೊಂಡ ಹಿನ್ನೆಲೆ ಯಾವುದೇ ಅನಾಹುತ ಸಂಭವಿಸದಂತೆ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಪೊಲೀಸರು ಕಾದು ಕುಳಿತಿದ್ದಾರೆ. ರಸ್ತೆಗಳಿಗೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಿ ವಾಹನಗಳನ್ನು ಕಳುಹಿಸಲಾಯಿತು.

ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಬಡಾವಣೆಗಳ ನಿರ್ಮಾಣವೇ ಇದಕ್ಕೆಲ್ಲ ಕಾರಣ ಎಂಬುದು ಸ್ಥಳೀಯರ ಆರೋಪವಾಗಿದ್ದು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಶಾಸಕ ಸ್ವರೂಪ ಪ್ರಕಾಶ್ ಈ ಬಗ್ಗೆ ಕೂಡಲೇ ಸರ್ಕಾರಕ್ಕೆ ಪತ್ರ ಬರೆದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಅತಿ ಶೀಘ್ರವಾಗಿ ರಾಜಕಾಲುವೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದರು.

ಖಾಸಗಿ ಲೇಔಟ್ ಗಳು ತರಾತುರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಿದ ಹಿನ್ನೆಲೆ ಈ ರೀತಿಯ ಅತಿವೃಷ್ಟಿ ಸಂಭವಿಸಲು ಕಾರಣ ಮುಂದಿನ ದಿನಗಳಲ್ಲಿ ಹೂಡ ಅಧಿಕಾರಿಗಳ ಗಮನಕ್ಕೆ ತಂದು ಇಂತಹ ವೈಜ್ಞಾನಿಕ ಕಾಮಗಾರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ನಗರಸಭೆ ಆಯುಕ್ತ ನರಸಿಂಹಮೂರ್ತಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!