ಪ್ರೀತಿ ನಿರಾಕರಣೆ: ಕಟ್ಟಡ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪ್ರೀತಿ ನಿರಾಕರಿಸಿದ್ದಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಈಕೆ ಇಂದು ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರ ಪ್ರಕಾರ ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಿದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

‘ನನ್ನ ಸಾವಿಗೆ ಯಾರೂ ಕಾರಣರಲ್ಲ. ಈ ಜೀವನದ ಮೇಲೆ ಜಿಗುಪ್ಸೆ ಬಂದ ಕಾರಣದಿಂದ ನಾನೇ ಸ್ವತಃ ಈ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ನನ್ನ ಕುಟುಂಬಕ್ಕೆ ಹಾಗೂ ಭೀಮೇಶ್ ನಾಯಕ್ ಅವರ ಮೇಲೆ ನೀಡಿದ್ದ ಸುಳ್ಳು ಕೇಸ್‍ನಿಂದ ತುಂಬಾ ಪಶ್ಚಾತ್ತಾಪಪಟ್ಟುಕೊಳ್ಳುತ್ತಿದ್ದೇನೆ. ಭೀಮೆಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್‍ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದು ಡೆತ್ ನೋಟ್ ನಲ್ಲಿ ಆಯಿಶಾ ಬರೆದುಕೊಂಡಿದ್ದಾಳೆ.

ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!