ದಿಗಂತ ವರದಿ ವಿಜಯಪುರ:
ಸೋಲಿನ ಭೀತಿಯಿಂದ ಕಾಂಗ್ರೆಸ್ ಎಸ್‌ಡಿಪಿಐ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜಾಸ್ತಿ ಸೀಟ್ ಗೆಲ್ಲಲು ಎಸ್‌ಡಿಪಿಐ ಸ್ಪರ್ಧೆಯಿಂದ ಹಿಂದೆ ಉಳಿದಿದೆ. ಕಾಂಗ್ರೆಸ್ ವಿನಂತಿ ಮೇರೆಗೆ ಬಿಜೆಪಿ ವಿರುದ್ಧ ಸ್ಪರ್ಧೆ ಬಂದ್ ಮಾಡಿದ್ದೇವೆ ಎಂದಿದೆ ಎಂದರು.
ಅಲ್ಲದೇ, ಜಾಗತಿಕ ಮಟ್ಟದಲ್ಲಿ ಭಾರತ ಪಾಕಿಸ್ತಾನ ಪ್ರೇರಿತ ಉಗ್ರವಾದ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್ ಅವರ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ವಿದೇಶಿ ವ್ಯಾಮೋಹ ಇದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.