October 7, 2026
Wednesday, October 7, 2026
spot_img

ದುಲೀಪ್ ಟ್ರೋಫಿ ಫೈನಲ್‌: ಕೆಎಲ್ ರಾಹುಲ್ ಔಟ್, ಪಡಿಕ್ಕಲ್–ಸಿರಾಜ್‌ಗೆ ಮಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2026ರ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಟೆಸ್ಟ್ ತಂಡದ ಉಪನಾಯಕ ಕೆಎಲ್ ರಾಹುಲ್ ಆಡೋದಿಲ್ಲ ಎಂದು ದಕ್ಷಿಣ ವಲಯದ ನಾಯಕ ತಿಲಕ್ ವರ್ಮಾ ಹೇಳಿದ್ದಾರೆ.

ದಕ್ಷಿಣ ವಲಯ ತಂಡಕ್ಕೆ ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್ ಕೂಡ ಲಭ್ಯರಾಗುವ ನಿರೀಕ್ಷೆಯಿದೆ. ಇವರಿಬ್ಬರ ಸೇರ್ಪಡೆಯಿಂದ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ತಿಲಕ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ:

ಪಡಿಕ್ಕಲ್, ಸಿರಾಜ್ ಅನುಭವದ ನೆರವು

ಕಳೆದ ಕೆಲವು ಪಂದ್ಯಗಳಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರ ಸೇರ್ಪಡೆ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲಿದೆ. ಯುವ ಆಟಗಾರರನ್ನು ಒಳಗೊಂಡಿರುವ ದಕ್ಷಿಣ ವಲಯ ತಂಡಕ್ಕೆ ಪಡಿಕ್ಕಲ್ ಮತ್ತು ಸಿರಾಜ್ ಅವರ ಅನುಭವವೂ ಬಹಳಷ್ಟು ನೆರವಾಗಲಿದೆ ಎಂದು ಹೇಳಿದರು.

ಶ್ರೀಲಂಕಾ ವಿರುದ್ಧ ನಡೆದ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಡಿಕ್ಕಲ್ ಎರಡು ಶತಕಗಳನ್ನು ಸಿಡಿಸಿ ಭರ್ಜರಿ ಪ್ರದರ್ಶನ ನೀಡಿದ್ದು, ಇದೀಗ ದುಲೀಪ್ ಟ್ರೋಫಿ ಫೈನಲ್‌ನಲ್ಲೂ ಅದೇ ಅಬ್ಬರ ಮುಂದುವರಿಸುವ ನಿರೀಕ್ಷೆ ಇದೆ.

Must Read