‘ಸಲಗ’ ಯಶಸ್ಸಿನ ನಂತರ ತೆಲುಗು ಚಿತ್ರಕ್ಕೆ ದುನಿಯಾ ವಿಜಯ್‌ ಗ್ರ್ಯಾಂಡ್‌ ಎಂಟ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2021ರಲ್ಲಿ ದುನಿಯಾ ವಿಜಯ್‌ ಅವರ ನಿರ್ದೇಶನದಲ್ಲಿ ಮೂಡಿಬಂದ ಸಲಗ ಚಿತ್ರಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದರ ಯಶಸ್ಸಿನ ಬೆನ್ನಲ್ಲೇ ನಟ ದುನಿಯಾ ವಿಜಯ್‌ ಟಾಲಿವುಡ್‌ ಗೆ ಎಂಟ್ರಿ ಕೊಡಲಿದ್ದಾರೆ.
ಈ ಬಗ್ಗೆ ಮೈತ್ರಿ ಮೂವಿ ಮೇಕರ್ಸ್‌ ಖಚಿತಪಡಿಸಿದ್ದು, ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರ 107ನೇ ಸಿನಿಮಾದಲ್ಲಿ ದುನಿಯಾ ವಿಜಯ್‌ ಕಾಣಿಸಿಕೊಳ್ಳಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಾಲಕೃಷ್ಣ ಅವರ ಚಿತ್ರತಂಡ ದುನಿಯಾ ವಿಜಯ್‌ ಅವರಿಗೆ ಸ್ವಾಗತದ ಪೋಸ್ಟರ್‌ ಬಿಡುಗಡೆ ಮಾಡಿದೆ.
ಬಾಲಕೃಷ್ಣ ಅವರ 107ನೇ ಚಿತ್ರಕ್ಕೆ ಇನ್ನು ಟೈಟಲ್‌ ಸಿಕ್ಕಿಲ್ಲ. ಈ ಸಿನಿಮಾವನ್ನು ಗೋಪಿಚಂದ್‌ ಮಲಿನೇನಿ ನಿರ್ದೇಶನ ಮಾಡುತ್ತಿದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಶ್ರುತಿ ಹಾಸನ್‌ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!