ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ನಟಿಸಿರುವ ಡಂಕಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
‘ಡಂಕಿ’ ಚಿತ್ರ ವರ್ಷಾಂತ್ಯದಲ್ಲಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಯಾಗುವ ಕೆಲವು ದಿನಗಳ ಮೊದಲು ಶಾರುಖ್ ಶಿರಡಿ ಸಾಯಿಬಾಬಾನ ದರ್ಶನ ಪಡೆದಿದ್ದು, ಅವರಿಗೆ ಪುತ್ರಿ ಸುಹಾನಾ ಸಾಥ್ ನೀಡಿದ್ದಾರೆ.
ಶಾರುಖ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್ ಅವರ ಭೇಟಿ ವೇಳೆ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಾರುಖ್ ಜತೆಗೆ ಅವರ ವ್ಯವಸ್ಥಾಪಕಿ ಪೂಜಾ ದದ್ಲಾನಿ ಕೂಡ ಜೊತೆಗಿದ್ದಾರೆ.
ಡಿಸೆಂಬರ್ 21 ರಂದು ‘ಡಂಕಿ’ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ರಾಜ್‌ಕುಮಾರ್ ಹಿರಾನಿ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆ ಮಾಡುವ ಮೂಲಕ ನಿರ್ಮಾಪಕರು ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದ್ದಾರೆ.