‘ಡುಪ್ಲೆಸಿಸ್’​​​ ಭರ್ಜರಿ ಬ್ಯಾಟಿಂಗ್: ಕೇವಲ 20 ಬಾಲ್​ನಲ್ಲಿ ಅರ್ಧಶತಕ ಸಿಡಿಸಿದ ಕ್ಯಾಪ್ಟನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್‌ ತಂಡವು ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್‌ಗಳ ನಷ್ಟಕ್ಕೆ 287 ರನ್ ಗಳಿಸಿತು. ಪರಿಣಾಮವಾಗಿ, ಹೊಸ ದಾಖಲೆಯನ್ನು ಬರೆದಿದೆ.

ಇದೀಗ ಆರ್‌ಸಿಬಿ ಬ್ಯಾಟಿಂಗ್ ಮಾಡುತ್ತಿದ್ದು, ಹೈದರಾಬಾದ್ ನೀಡಿದ ಗುರಿಯನ್ನು ಸಾಧಿಸುವಲ್ಲಿ ಪಣತೊಟ್ಟಿದೆ. ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು.

ವಿರಾಟ್ ಕೇವಲ 20 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 4 ಬೌಂಡರಿಗಳ ಸಹಿತ 42 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ, ಬ್ಯಾಟಿಂಗ್ ಮಾಡಿದ ನಾಯಕ ಫಾಫ್​ ಡುಪ್ಲೆಸಿಸ್ ಕೇವಲ 23 ಎಸೆತಗಳಲ್ಲಿ 51 ರನ್ ಗಳಿಸಿದರು ಸ್ಟ್ರೈಕ್​ ರೇಟ್​​ 210ಕ್ಕೂ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!