ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಗಳಿಂದಲೂ ಗುಣಮಟ್ಟ, ಬಣ್ಣದಲ್ಲಿ ಯಾವುದೇ ಬದಲಾವಣೆ ಮಾಡದ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಬೇಧಿಸಿದ್ದಾರೆ.
ನಕಲಿ ಉತ್ಪನ್ನ, ಪ್ಯಾಕಿಂಗ್‌ಗೆ ಬಳಸುತ್ತಿದ್ದ ಬಾಕ್ಸ್ ಸೇರಿದಂತೆ ಎರಡು ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಸಚಿವರಿಗೂ ಅನಾಮಧೇಯ ಕರೆ ಬಂದಿದ್ದು, ನಿಜವೋ ಇಲ್ಲವೋ ಎಂದು ಪರಿಶೀಲಿಸಲು ಸ್ವತಃ ಕೆಎಸ್‌ಡಿಲ್ ಸಿಬ್ಬಂದಿ ಉತ್ಪನ್ನ ಖರೀದಿಸಿ ಜಾಲವನ್ನು ಬೇಧಿಸಿದ್ದಾರೆ,