Tuesday, July 5, 2022

Latest Posts

ದುರ್ಗಾ ದೇವಿ ವಿಸರ್ಜನೆ ವೇಳೆ ಜನರ ಮೇಲೆ ಹರಿದ ಕಾರು: ಮೂವರಿಗೆ ಗಾಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದುರ್ಗಾ ದೇವಿ ಮೂರ್ತಿಯ ವಿಸರ್ಜನೆಯ ವೇಳೆ ಹಿಮ್ಮುಖ ಚಲಿಸಿದ ಕಾರೊಂದು ಜನರ ಮೇಲೆ ಹರಿದು  ಬಾಲಕ ಸೇರಿದಂತೆ ಮೂವರಿಗೆ ಗಾಯವಾಗಿರುವ ಘಟನೆ, ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಈ ದುರ್ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಈ ದೃಶ್ಯದಲ್ಲಿ ಕಾರು ಹಿಮ್ಮುಕವಾಗಿ ವೇಗವಾಗಿ ಚಲಿಸುವುದನ್ನು ಕಾಣಬಹುದು. ಕಾರು ವೇಗವಾಗಿ ಚಲಿಸುತ್ತಿರುವುದನ್ನು ನೋಡುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಜನರೆಲ್ಲ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕೂಡ ಇಲ್ಲಿ ಕಾಣಬಹುದಾಗಿದೆ.

ಭೋಪಾಲ್ ರೈಲ್ವೇ ನಿಲ್ದಾಣದ ಹೊರಗಿನ ರಸ್ತೆಯಲ್ಲಿ ದುರ್ಗಾ ಮೂರ್ತಿಯ ಮೆರವಣಿಗೆ  ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅವರ ಕಾಲಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದಲ್ಲಿದ್ದ  ಸಿಸಿಟಿವಿ ಫೂಟೇಜ್  ಸಹಾಯದಿಂದ ಆರೋಪಿಗಳನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss