ದುರ್ಗಾ ದೇವಿ ಮೂರ್ತಿ ಮೆರವಣಿಗೆ, ಬೆಂಗಳೂರಿನ ಈ ರಸ್ತೆ ಕಡೆ ಓಡಾಡ್ಬೇಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನವರಾತ್ರಿಯ ಕೊನೆ ದಿನ ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ರವಿವಾರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾ ದೇವಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಅಂದು ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 04:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.

ತಿರುವಳ್ಳವರ್ ಪ್ರತಿಮೆ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಣಸ್ವಾಮಿ ಮೊದಲಿಯರ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಕ್ಲಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್‌ನಿಂದ ಗುರುದ್ವಾರ ಜಂಕ್ಷನ್​ಲ್ಲಿ ಬಲ ತಿರುವು ಪಡೆದು ಗಂಗಾಧರ ಚೆಟ್ಟಿ ರಸ್ತೆ – ಡಿಕನ್ಸನ್ ರಸ್ತೆಯಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ – ವೀಲರ್ ರಸ್ತೆ ಕಡೆಗೆ ಹೋಗಬಹುದಾಗಿದೆ.

ತಿರುವಳ್ಳವ‌ರ್ ಪ್ರೇಮ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಶೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕನ್ಸನ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!