spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಸೋಂಕು ತಗುಲಿದ ಮೊದಲ ಎರಡು ವಾರದಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಂಭವ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕು ತಗುಲಿದ ಮೊದಲ ಎರಡು ವಾರಗಳಲ್ಲಿ ಹೃದಯಾಘಾತ ಮತ್ತು ಸ್ಟ್ರೋಕ್ ಅಪಾಯ ಮೂರು ಪಟ್ಟು ಹೆಚ್ಚಿದೆ ಎಂದು ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ವರದಿ ತಿಳಿಸಿದೆ.
ಫೆ.1, 2020 ರಿಂದ ಸೆ.14 ವರೆಗೆ ಸ್ವೀಡನ್‌ನಲ್ಲಿ 348,481 ಕೋವಿಡ್ ಸೋಂಕಿಗೆ ತುತ್ತಾಗದ ವ್ಯಕ್ತಿಗಳ ಜೊತೆ 86,742 ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಹೋಲಿಕೆ ಮಾಡಿದಾಗ ಹೃದಯಾಘಾತ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳ ಉಲ್ಬಣದ ಬಗ್ಗೆ ಅಧ್ಯಯನ ಮಾಡಿದೆ.
‘ಕೊರೋನಾ ಸೋಂಕು ತಗುಲಿದ ನಂತರದ ಮೊದಲ ಎರಡು ವಾರಗಳಲ್ಲಿ ತೀವ್ರವಾದ ಹೃದಯಾಘಾತ, ಪಾರ್ಶ್ವವಾಯು ಸಂಭವ ಮೂರು ಪಟ್ಟು ಹೆಚ್ಚಿದೆ ಎನ್ನುವುದನ್ನು ಕಂಡುಕೊಂಡಿದ್ದೇವೆ’ ಎಂದು ಸ್ವೀಡನ್ ಉಮಿಯಾ ವಿಶ್ವವಿದ್ಯಾಲಯದ ಅಧ್ಯಯನದ ಭಾಗವಾಗಿದ್ದ ಲೇಖಕ ಒಸ್ವಾಲ್ಡೊ ಪೊನ್ಸೆಕಾ ರೊಡ್ರಿಗಸ್ ತಿಳಿಸಿದ್ದಾರೆ.
ಲಸಿಕೆ ಹಾಕಿಸುವುದು ತುಂಬಾನೇ ಮುಖ್ಯವಾಗಿದೆ. ಈ ಫಲಿತಾಂಶಗಳನ್ನು ನೋಡಿದಾಗ ಲಸಿಕೆ ಹಾಕಿಸಿಕೊಂಡ ವೃದ್ಧರಿಗೆ ಲಸಿಕೆ ಪ್ರಯೋಜನ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss