ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಂಗಳೂರಿನ ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಪ್ರಾರಂಭವಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ವೇಳೆ ಅಭಿಮಾನಿಯೊಬ್ಬರು ಹೂವಿನ ಜೊತೆಗೆ ಮೊಬೈಲ್ (Mobile) ಎಸೆದ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ.
ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆದಿದೆ. ತೆರೆದ ವಾಹನದಲ್ಲಿ ಮೋದಿರೋಡ್ ಶೋ ನಡೆದಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸಿದರು.
ರೋಡ್ ಶೋ ಜೆ.ಪಿ ನಗರದ ಬಳಿ ಬಂದಾಗ ಮೋದಿಗೆ ಹೂ ಎಸೆಯುವಾಗ ಮೊಬೈಲ್ ಬಿದ್ದಿದ್ದು, ಆದರೆ ಯಾವುದೇ ಅನಾಹುತಗಳಾಗಿಲ್ಲ. ಬದಲಿಗೆ ಮೊಬೈಲ್ ರಸ್ತೆ ಮೇಲೆ ಬಿದ್ದಿದೆ.
ಈ ರೀತಿ ಅಹಿರತಕರ ಘಟನೆ ಇದೇ ಮೊದಲಲ್ಲ. ಈ ಮೊದಲು ಕೇರಳದ ಕೊಚ್ಚಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‍ಶೋ ವೇಳೆ ಮೊಬೈಲ್ ಎಸೆಯಲಾಗಿತ್ತು. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಇದನ್ನು ಗಮನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾಗಿ ಮೋದಿಗೆ ತಗಲದಂತೆ ನೋಡಿಕೊಂಡಿದ್ದಾರೆ.
ಕಳೆದ ವಾರ ಮೈಸೂರಿನಲ್ಲಿ ನಡೆದಿದ್ದ ರೋಡ್ ಶೋ ವೇಳೆ ಮೋದಿಯತ್ತ ಹೂವಿನ ದಳಗಳೊಂದಿಗೆ ಮೊಬೈಲ್ ಫೋನ್ ಅನ್ನು ಎಸೆದಿದ್ದರು. ಅದನ್ನು ಸ್ವತಃ ಮೋದಿ ಹಾಗೂ ಎಸ್‍ಪಿಜಿಯವರು ಗಮನಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಅವರು ರೋಡ್ ಶೋ ವೇಳೆಯೇ ಮೊಬೈಲ್ ಅನ್ನು ಹಿಂದಿರುಗಿಸುವಂತೆ ಸನ್ನೆಯನ್ನು ಮಾಡಿದ್ದರು. ನಂತರ ಮೊಬೈಲ್ ಫೋನ್ ಅನ್ನು ವಾಪಸ್ ನೀಡಲಾಗಿತ್ತು.