ದಸರಾ ಮಹೋತ್ಸವ: ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಸರಾ ಮಹೋತ್ಸವದ ಹಿನ್ನೆಲೆ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್​ ಚಾಲನೆ ನೀಡಿದರು.

ಮೈಸೂರಿನ ಕೆ.ಆರ್ ಆಸ್ಪತ್ರೆಯ ಬಳಿ ಇರುವ ವೃತ್ತದಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್ ಅಧಿಕೃತ ಚಾಲನೆ ನೀಡಿದರು

ಮೈಸೂರಿನ 126 ಕಿಲೋ ಮೀಟರ್​ವರೆಗೂ ದೀಪಾಲಂಕಾರ ಮಾಡಿದ್ದು, 26 ವೃತ್ತದಲ್ಲಿ ವೈರೆಟಿ ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ.ಮೈಸೂರು ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ-2022ರ ಮಹೋತ್ಸವ ಸಂಭ್ರಮ ಆರಂಭಗೊಂಡಿದೆ. ಮೈಸೂರು ದಸರಾ ವೀಕ್ಷಣೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತೆರಳುವಂತ ಪ್ರವಾಸಿಗರಿಗಾಗಿ, ಕೆ ಎಸ್ ಆರ್ ಟಿ ಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!