ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್ ಗೌರವ್ ಎಂಬವರು ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಇದೆ 22 ರಂದು ದಸರಾ ಉದ್ಘಾಟನೆ ನಡೆಯಲಿದೆ. ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಿದ್ದಾರೆ. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಶುಕ್ರವಾರ ನಡೆಸುವುದಾಗಿ ಹೇಳಿದೆ.