ಹೊಸದಿಗಂತ ವರದಿ, ತುಮಕೂರು :
ತುಮಕೂರು ಜಿಲ್ಲಾಡಳಿತವು ಪ್ರಥಮ ಬಾರಿಗೆ ಆಯೋಜಿಸಿರುವ ‘ತುಮಕೂರು ದಸರಾ 2024’ ಅದ್ಧೂರಿ ಕಾರ್ಯಕ್ರಕ್ಕೆ ಮಾನ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಚಾಲನೆ ನೀಡಿದರು.
ಶ್ರೀ ಶಿವಕುಮಾರ ಮಹಾಸ್ವಾಮೀಜಿ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಟಾಪಿಸಿರುವ ಶ್ರೀ ಶೈಲಾಪುತ್ರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮುಖ್ಯವೇದಿಕೆಯಲ್ಲಿ ಡೊಳ್ಳು ಭಾರಿಸುವ ಮೂಲಕ ವಿವಿಧ ವೈವಿದ್ಯಮಯ ಕಾರ್ಯಕ್ರಮಗಳಿಗೂ ಚಾಲನೆ ನೀಡಿದೆರು. ಶ್ರೀ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕೊರಟಗೆರೆಯ ನರಸಿಂಹಗಿರಿ ಕ್ಷೇತ್ರ ಎಲೆರಾಂಪುರದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಕೆ.ಷಡಕ್ಷರಿ, ಮಾಜಿ ಶಾಸಕ ರಫಿಕ್ ಅಹ್ಮದ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ವೆಂಕಟ್ ಉಪಸ್ಥಿತರಿದ್ದರು.