ದಸರಾ ಹಬ್ಬ: ಇಂದು ನಾಡಿನಾದ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ ಆಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಾಡಿನಾದ್ಯಂತ ದಸರಾ ಹಬ್ಬವನ್ನು ಇಂದು ಅತ್ಯಂತ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಎಲ್ಲೆಡೆ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಮನೆ ಮನಗಳಲ್ಲಿ ಹಬ್ಬದ ವಾತಾವರಣ ಸಡಗರದಿಂದ ಕೂಡಿದೆ.

ಮೈಸೂರು ಅರಮನೆಯಲ್ಲೂಇಂದು ಆಯುಧ ಪೂಜೆಯ ಕೈಂಕರ್ಯಗಳು ಆರಂಭಗೊಂಡಿವೆ. ಬೆಳಗ್ಗೆ 5.30ರಿಂದಲೇ ಪೂಜಾ ವಿಧಿವಿಧಾನಗಳು ಶುರುವಾಗಿವೆ.

ಹಿಂದೂಗಳ ಹಬ್ಬಗಳಲ್ಲಿ ನವರಾತ್ರಿಯೂ ಒಂದು. ಒಂಬತ್ತು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಪ್ರತಿ ದಿನವೂ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಅವುಗಳಲ್ಲಿ ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಗೆ ಹೆಚ್ಚಿನ ಮಹತ್ವವಿದೆ.

ಇಂದು ಮನೆಯಲ್ಲಿ ಉಪಯೋಗಿಸುವ ಚೂರಿಯಿಂದ ಹಿಡಿದು ಎಲ್ಲಾ ವಿಧದ ಆಯುಧಗಳನ್ನು ಪೂಜಿಸಲಾಗುತ್ತಿದೆ. ಈ ದಿನ ಮನೆ ಹೂಗಳಿಂದ ಅಲಂಕೃತಗೊಂಡಿರುತ್ತದೆ. ಅಲ್ಲದೇ ಮನೆಯಲ್ಲಿರುವ ವಾಹನಗಳನ್ನು ತೊಳೆದು, ಹೂಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಗುತ್ತಿದೆ. ಒಟ್ಟಾರೆ ನಾಡಹಬ್ಬ ದಸರಾ ಆಚರಣೆ ಅತ್ಯಂತ ಉತ್ಸಾಹ ಸಡಗರದಿಂದ ಕೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!