ಹೊಸದಿಗಂತ ವರದಿ ಮೈಸೂರು:
ಚಾಮುಂಡಿ ಬೆಟ್ಟದಲ್ಲಿ ಇಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ನೆರವೇರಿಸಿದ ಸರಸ್ವತಿ ಪುತ್ರ ಹಂಸಲೇಖರಿಗೆ ಸರಸ್ವತಿಯ ವಿಗ್ರಹವನ್ನು ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಂಬೂಸವಾರಿಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತ ವಿಗ್ರಹವನ್ನು ನೀಡಿ ಗೌರವಿಸಲಾಯಿತು.