ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಆನೆಗಳಾದ ಧನಂಜಯ ಹಾಗೂ ಕಂಜನ್ ಆನೆಯ ಕಾದಾಟದ ನಂತರ ಎಚ್ಚೆತ್ತುಕೊಂಡಿರುವ ಕರ್ನಾಟಕ ಅರಣ್ಯ ಇಲಾಖೆ, ಆನೆಗಳ ಬಳಿ ಫೋಟೋ ಶೂಟ್, ರೀಲ್ಸ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಯಾವುದೇ ಕಾರಣಕ್ಕೆ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವಿಡಿಯೋ ಮಾಡಿಕೊಂಡು ರೀಲ್ಸ್‌ಗೆ ಮುಂದಾಗುವಂತ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.
ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದನಾಡಿಗೆ ಬಂದು ಪ್ರಸ್ತುತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋ ಶೂಟ್ ಹಾಗೂ ರೀಲ್ಸ್ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಅವಕಾಶ ನೀಡಿದ್ದಾರೆ. ಇದರಿಂದ ಆನೆಗಳು ವಿಚರಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಂಜನ್ ಹಾಗೂ ಧನಂಜನ್ ಎನ್ನುವ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಿಸಿಸಿಎಫ್ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಧಿಕಾರಿಗಳೇ ರೀಲ್ಸ್‌ಗೆ ಅವಕಾಶ ನೀಡ್ತಿದ್ದಾರೆ ಎಂಬ ಆರೋಪ ಇದೆ. ಇದರಿಂದ ಆನೆಗಳು ವಿಚಲಿತಗೊಂಡು ಅನುಚಿತವಾಗಿ ವರ್ತಿಸುತ್ತಿವೆ. ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಬಗ್ಗೆ ವರದಿಯಿಂದ ತಿಳಿದುಬಂದಿದೆ. ಕಾಂಜನ್, ಧನಂಜಯ ಆನೆಗಳು ಕಾದಾಟ ಆಗಲು ಇದೂ ಕಾರಣ. ಆನೆಯ ದಂತ, ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಳ್ತಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದಿರುವ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡಬೇಕು. ಅಲ್ಲಿಯ ತನಕ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.
ಕೆಲವರು ಆನೆಗಳ ದಂತಗಳನ್ನು ಹಿಡಿದುಕೊಂಡು, ಮತ್ತ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿರುವ ಚಿತ್ರಗಳೂ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ಆನೆಗಳನ್ನು ತಂದ ನಂತರ ಸುರಕ್ಷಿತವಾಗಿ ಅವುಗಳನ್ನು ಶಿಬಿರಕ್ಕೆ ಬಿಡುವವರೆಗೂ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್‌ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ ಹಾಗು ಸಿಬ್ಬಂದಿಗೆ ಸ್ಪಷ್ಟನೆ ನೀಡಬೇಕು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.