Sunday, September 14, 2025

ಸೆ.20ರಿಂದ ರಾಜ್ಯದ ಶಾಲೆಗಳಿಗೆ ದಸರಾ ರಜೆ ಶುರು: ಇಲ್ಲಿದೆ ಸಂಪೂರ್ಣ ಮಾಹಿತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಈ ಬಾರಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ.

ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. ಒಟ್ಟು 18 ದಿನಗಳು ರಜೆ ಸಿಗಲಿದೆ.

ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ .

ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಮಳೆಯಾಗಿದೆ. ಹಾಗೆ ಮಳೆಯ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಅತ್ಯಧಿಕ ರಜೆ ನೀಡಲಾಗಿದೆ. ಕೆಲವು ಕಡೆ ಬರೋಬ್ಬರಿ 10ಕ್ಕೂ ಹೆಚ್ಚು ದಿನ ಮಳೆ ಕಾರಣದಿಂದ ರಜೆ ನೀಡಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಕೂಡ ಕಡಿಮೆಯಾಗಿವೆ.

ಅಕ್ಟೋಬರ್‌ನಲ್ಲಿ ಸಾಲು ಸಾಲು ರಜೆಗಳಿವೆ, ಅದ್ರಲ್ಲೂ ವಾಲ್ಮೀಕಿ ಜಯಂತಿ 7ರಂದು ರಜೆ ಇದೆ. ಇದಾದ ಬಳಿಕ ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್‌ 22 ಕ್ಕೆ ಬಲಿಪಾಡ್ಯ ಸಾರ್ವಜನಿಕ ರಜೆ ಇದೆ. ಅಕ್ಟೋಬರ್‌ನಲ್ಲಿ ಸತತ ರಜೆಗಳಿವೆ.

ಇದನ್ನೂ ಓದಿ