ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ರಾಜಕೀಯ ನಡೆಗಳ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಬೆನ್ನಿಗೇ ಇಂದು ಅವರು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಹಠಾತ್ ರದ್ದುಗೊಂಡಿದ್ದು, ಇನ್ನಷ್ಟು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ಸೋಮವಾರ ಬೆಂಗಳೂರಿನಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಡಿ.ವಿ. ಸದಾನಂದ ಗೌಡ, ಮಂಗಳವಾರ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಆದರೆ ಇಂದು ಬೆಳಗ್ಗೆ ನಡೆಸಬೇಕಾಗಿದ್ದ ಸುದ್ದಿಗೋಷ್ಠಿ ಮುಂದೂಡಲ್ಪಟ್ಟಿದೆ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿರುವ ಹಿನ್ನಲೆಯಲ್ಲಿ ಪತ್ರಿಕಾಗೋಷ್ಟಿ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.