ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೃದಯಾಘಾತದಿಂದ ನಿಧನರಾದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೇಶ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನೆರವೇರಿತು.

ಇಂದು ಬೆಳಗ್ಗೆ ರವೀಂದ್ರಕಲಾ ಕ್ಷೇತ್ರದಲ್ಲಿ ದ್ವಾರಕೀಶ್ ಅವರ ಕೊನೆಯ ದರ್ಶನಕ್ಕೆ ಸಿದ್ಧತೆ ನಡೆಸಲಾಗಿತ್ತು. ಸಿದ್ದರಾಮಯ್ಯ, ಸಚಿವ ಶಿವರಾಜ್ ತಂಗಡಗಿ, ನಟರಾದ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್, ದ್ರುವ ಸರ್ಜಾ, ಜಗ್ಗೇಶ್, ಶೃತಿ, ಸುಧರಾಣಿ ಸೇರಿದಂತೆ ಚಿತ್ರರಂಗದ ಗಣ್ಯರು ಆಗಮಿಸಿ ನಮನ ಸಲ್ಲಿಸಿದರು.

ಬಳಿಕ ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಚಾಮರಾಜಪೇಟೆಯ ಚಿತಾಗಾರಕ್ಕೆ ಸ್ಥಳಾಂತರಿಸಲಾಯಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಪ್ರೇತ ಸಂಸ್ಕಾರದ ಹಿನ್ನೆಲೆಯಲ್ಲಿ ಕಿವಿಯಲ್ಲಿ ನಾರಾಯಣ ಸ್ಮರಣೆ, ಚಿತಾ ಅಗ್ನಿಹೋಮ ಸೇರಿದಂತೆ ಕೊನೇ ಹಂತದ ವಿಧಿ-ವಿಧಾನ ನೆರವೇರಿಸಲಾಯಿತು.

ದ್ವಾರಕೀಶ್ ಅವರ ಹಿರಿಯ ಮಗ ಯೋಗಿ, ದ್ವಾರಕೀಶ್ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕುಟುಂಬದ ಸದಸ್ಯರು, ಹಿರಿಯ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಮತ್ತು ಕನ್ನಡ ಚಿತ್ರರಂಗದ ಪ್ರಮುಖರು ಹಿರಿಯ ನಟನಿಗೆ ಕಣ್ಣೀರ ವಿದಾಯ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!