ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟ ದ್ವಾರಕೀಶ್ (Dwarakish) ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನೇತ್ರದಾನ (Eye Donate) ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ.
ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು. ಈಗ ದ್ವಾರಕೀಶ್ ಕೂಡ ತಮ್ಮ ಸಾವಿನ ನಂತರ ಇತರರ ಬಾಳಿಗೆ ಬೆಳಕಾಗಿದ್ದಾರೆ.
ದ್ವಾರಕೀಶ್ ಅವರು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ. ಅವರ ನಿರ್ಧಾರದಂತೆ ಕುಟುಂಬ ಕೂಡ ಸಮ್ಮತಿ ನೀಡಿದೆ. ಕೆಲವೇ ಕ್ಷಣಗಳಲ್ಲಿ ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆಯಲಿದೆ.
ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರುಶನಕ್ಕೆ ನಾಳೆ (ಏ.17) ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.