ಟೀಂ ಚೆನ್ನೈ ಬಿಟ್ಟು ಚಾಂಪಿಯನ್ ತಂಡ ಸೇರಿಕೊಂಡ ಡ್ವೇನ್ ಬ್ರಾವೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2025 ರ ಐಪಿಎಲ್​ಗೂ ಮುನ್ನ ಎಲ್ಲಾ ತಂಡಗಳಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅದರಂತೆ ಇದೀಗ ಕಳೆದ ಆವೃತ್ತಿಯ ಚಾಂಪಿಯನ್ ಕೆಕೆಆರ್ ತಂಡಕ್ಕೆ ಹೊಸಬರ ಎಂಟ್ರಿಯಾಗಿದೆ.

ಈ ಮೊದಲು ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರ ಸ್ಥಾನಕ್ಕೆ ಅನುಭವಿ ಕ್ರಿಕೆಟಿಗ ಡ್ವೇನ್ ಬ್ರಾವೋ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಕೆಆರ್ ಫ್ರಾಂಚೈಸಿ ತಿಳಿಸಿದೆ ಮೆಂಟರ್ ಆಗಿ ಸೇರ್ಪಡೆಗೊಂಡಿದ್ದಾರೆ.

ಇತ್ತೀಚೆಗಷ್ಟೇ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಡ್ವೇನ್ ಬ್ರಾವೋ ಇದೀಗ ಐಪಿಎಲ್‌ನಲ್ಲಿ ಹೊಸ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡುತ್ತಿದ್ದ ಬ್ರಾವೋ, ಇಂಜುರಿ ಕಾರಣದಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಈ ಮೂಲಕ ಬಹಳ ವರ್ಷಗಳಿಂದ ಸಿಎಸ್​ಕೆ ತಂಡದೊಂದಿಗಿನ ಬಂಧವನ್ನು ಬ್ರಾವೋ ಮುರಿದುಕೊಂಡಿದ್ದಾರೆ. ಕಳೆದ ಆವೃತ್ತಿಯವರೆಗೂ ಸಿಎಸ್​ಕೆ ತಂಡದ ಬೌಲಿಂಗ್ ಕೋಚ್​ ಆಗಿ ಸೇವೆ ಸಲ್ಲಿಸುತ್ತಿದ್ದ ಬ್ರಾವೋ, ಇದೀಗ ಕೆಕೆಆರ್ ತಂಡದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!