ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿಯನ್ನು (9480683695) ಪ್ರಾರಂಭಿಸಲಾಗಿದೆ.
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ ಸಾರ್ವಜನಿಕರಿಗೆ ಇ-ಖಾತಾಗಳು ಸುಗಮವಾಗಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು, ಬಿಬಿಎಂಪಿಯು ತಕ್ಷಣದ ಕ್ರಮಗಳನ್ನು ಕೈಗೊಂಡಿದೆ.
ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿ ಪ್ರಾರಂಭವಾಗಿದ್ದು, eKhata Citizen Helpline – 9480683695ಗೆ ಕರೆ ಮಾಡಬಹುದಾಗಿದೆ. ಯಾರೇ ಲಂಚ ಕೇಳಿದರೆ ಅಥವಾ ವಿಳಂಬವಾದರೆ, ನಾಗರಿಕ ಸಹಾಯವಾಣಿಗೆ ಕರೆ ಮಾಡಬಹುದು ಹಾಗೂ ನಾಗರಿಕರು ತಾವೇ ಆನ್‌ಲೈನ್‌ನಲ್ಲಿ ಇ-ಖಾತಾವನ್ನು ರಚಿಸಬಹುದಾಗಿದೆ.ಅದಕ್ಕೆ ಈ ಸೈಟ್‌ಗೆ ಲಾಗಿನ್ ಆಗಬಹುದು. https://BBMPeAasthi.karnataka.gov.in