Sunday, December 10, 2023

Latest Posts

ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ : ಸಿಎಂಗೆ ಅಭಿನಂದನೆ ಕೋರಿದ ಈ.ಕೃಷ್ಣೇಗೌಡ

ಹೊಸದಿಗಂತ ವರದಿ ಹಾಸನ :

ಸರ್ಕಾರಿ ನೌಕರರ ತುಟಿಭತ್ಯೆಯನ್ನು ಶೇ.3.75% ರಷ್ಟು ಹೆಚ್ಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‌ಸರ್ಕಾರಿ ನೌಕರರ ಪರವಾಗಿ ಅಭಿನಂದ‌ ಸಲ್ಲಿಸುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳಮಾಡಿ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಕುರಿತು ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘವು ಕೂಡ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸಂಘವು ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಶೇ.3.75 % ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಲು ಆದೇಶಿಸ ನೀಡಿದ್ದಾರೆ. ನೌಕರರ ಹಿತದೃಷ್ಠಿಯಿಂದ ತುಟಿಭತ್ಯೆ ಹೆಚ್ವಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‌ಸರ್ಕಾರಿ ನೌಕರರ ಪರವಾಗಿ ಅಭಿನಂದ‌ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಶೇ.3.75% ತುಟಿಭತ್ಯೆ ಹೆಚ್ಚಳದ ಆದೇಶದಿಂದ ೬ ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ, 4.50 ಲಕ್ಷ ಪಿಂಚಣಿದಾರರಿಗೆ ಹಾಗೂ 3 ಲಕ್ಷ ನಿಗಮ ಮಂಡಳಿಗಳ ನೌಕರರಿಗೆ ಆರ್ಥಿಕ ಸೌಲಭ್ಯ ದೊರಕುತ್ತಿದೆ. ನೌಕರರ ಮನವಿಗೆ ಸ್ಪಂದಿಸಿ ಡಿ.ಎ ಸೌಲಭ್ಯ ಒದಗಿಸಿದ ಮುಖ್ಯಮಂತ್ರಿಗಳಿಗೆ, ಸನ್ಮಾನ್ಯ ಉಪ ಮುಖ್ಯಮಂತ್ರಿಗಳಿಗೆ, ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ನೌಕರರ ಸಂಘದ ರಾಜ್ಯಾಧ್ಯಕ್ಷರಿಗೆ ಮತ್ತು ಎಲ್ಲಾ ಪದಾಧಿಕಾರಿಗಳಿಗೆ ರಾಜ್ಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!