ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ಉಗ್ರಾದಾಳಿ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ನಾನು ತಾಲಿಬಾನಿ ಸದಸ್ಯ ಎಂದು ಹೇಳಿಕೊಂಡಿರುವ ಅಪರಿಚಿತ ವ್ಯಕ್ತಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೇಲ್ ಐಡಿಗೆ ಮೇಲ್ ಬಂದಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಪೊಲೀಸ್ ಎಚ್ಚರ ವಹಿಸಿದ್ದಾರೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ, ನಾನು ತಾಲಿಬಾನಿ ಸದಸ್ಯ ಎಂದು ಹೇಳಿಕೊಂಡಿರುವ ಮೇಲ್ ದೊರಕಿದೆ.
ಬೆದರಿಕೆ ಇ-ಮೇಲ್ ನಂತರ ಮುಂಬೈ ಪೊಲೀಸರು ಎನ್‌ಐಎ ಜತೆ ಜಂಟಿ ತನಿಖೆ ನಡೆಸುತ್ತಿದ್ದಾರೆ. ಜನವರಿಯಲ್ಲಿಯೂ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಬೆದರಿಕೆ ಕರೆ ಬಂದಿದ್ದು, ಶಾಲೆಯಲ್ಲಿ ಟೈಮ್ ಬಾಂಬ್ ಇದೆ ಎಂದು ವ್ಯಕ್ತಿ ಹೇಳಿಕೊಂಡಿದ್ದ.