ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಕ್ತರ ಮನೆಗಳಿಗೆ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಪ್ರಸಾದವನ್ನು ತಲುಪಿಸುವ ಇ-ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಚಾಲನೆ ನೀಡಿದೆ. ಆದರೆ ಇದೀಗ ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.
ಕೆಲವು ದಿನಗಳ ಹಿಂದಷ್ಟೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಇ-ಪ್ರಸಾದ ಸೇವೆಗೆ ಚಾಲನೆ ನೀಡಿ, ಇ-ಪ್ರಸಾದ ಸೇವೆ ಮೂಲಕ ಆರ್ಡರ್ ಮಾಡಿ ಪ್ರಸಾದ ತರಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿದರು.
ಇದೀಗ ಐದು ಸಾವಿರಕ್ಕೂ ಹೆಚ್ಚು ಭಕ್ತರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಅದರಲ್ಲೂ ಮಹಾರಾಷ್ಟ್ರದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ, ಸವದತ್ತಿ ಯಲ್ಲಮ್ಮನ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ. ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಇದುವರೆಗೆ ಬಂದಿರುವ ಬೇಡಿಕೆಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಯಲ್ಲಮ್ಮ ಹಾಗೂ ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಹೆಚ್ಚಿನ ಬೇಡಿಕೆ ಸಿಕ್ಕಿದೆ ಎಂದು ಹೇಳಲಾಗಿದೆ.