ಹೊಸದಿಗಂತ ಡಿಜಿಟಲ್ ಡೆಸ್ಕ್:
ಇ.ತುಕಾರಾಂ ಅವರು ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭೆಯ ಸದಸ್ಯರಾಗಿ ಸಂಸತ್ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಬಂದ ತುಕಾರಾಂ ಅವರು ವಿಧಾನಸಭೆಯ ಸ್ಪೀಕರ್ ಗೈರುಹಾಜರಾಗಿದ್ದರಿಂದ ಅನುಮತಿ ಪಡೆದು ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದರು.