ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆಗೆ ಕರೆ ನೀಡಬೇಕು, ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ಆಗ್ರಹಿಸಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ. ಕೂಡಲೇ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್‌ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.