ಮೊದಲ ಗೆಲುವಿಗಾಗಿ ಕಾತುರ: ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಪಿಎಲ್ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳು ಈ ಟೂರ್ನಿಯಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.

ಒಂದೆಡೆ ಮುಂಬೈ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಎದುರು ಸೋಲು ಕಂಡಿದ್ದು,ಅತ್ತ ಇ ಸನ್ ರೈಸರ್ಸ್ ಹೈದರಾಬಾದ್ ತಂಡ ಕೆಕೆಆರ್ ಎದುರು ಸೋಲು ಕಂಡಿತ್ತು.

ಈಗ ಉಭಯ ತಂಡಗಳು ಈ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ತಮ್ಮ ಗೆಲುವಿನ ಖಾತೆ ತೆರೆಯಲು ಬಯಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!