Sunday, January 25, 2026
Sunday, January 25, 2026
spot_img

ಸರಣಿ ಗೆಲುವ ತವಕ…ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ಇದುವರೆಗೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸೂರ್ಯ ಹೇಳಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ.ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಈ ಪಂದ್ಯದಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ರವಿ ಬಿಷ್ಣೋಯಿ ಆಡಲಿದ್ದಾರೆ.

ಭಾರತವು ಇಲ್ಲಿಯವರೆಗೆ ಗುವಾಹಟಿಯಲ್ಲಿ ನಾಲ್ಕು ಟಿ20ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದು, ಎರಡರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಮತ್ತು ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಇಶ್ ಸೋಧಿ ಮತ್ತು ಜಾಕೋಬ್ ಡಫ್ಫಿ.

Must Read