ಹೊಸದಿಗಂತ ಡಿಜಿಟಲ್ ಡೆಸ್ಕ್
ಉಪ್ಪಿ ಅಭಿಮಾನಿಗಳ ಪಾಲಿಗೆ ಏ.1 ಹಬ್ಬವಾಗಲಿದೆ. ಆ ದಿನ ಉಪೇಂದ್ರ ನಟನೆಯ ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರದ ‘ಹೋಮ್ ಮಿನಿಸ್ಟರ್’ ತೆರೆಗೆ ಅಪ್ಪಳಿಸಲಿದೆ.
ಉಪೇಂದ್ರ ಸುಮಾರು ಮೂರುವರ್ಷಗಳಿಂದ ತೆರೆಮೇಲೆ ಕಾಣಿಸಿಕೊಂಡಿರಲಿಲ್ಲ, ತಮ್ಮ ನೆಚ್ಚಿನ ನಟನ ಚಿತ್ರಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.
ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಉಪ್ಪಿ ಚಿತ್ರದಲ್ಲಿನ ತಮ್ಮ ಹೊಸ ಗೆಟ್‌ಅಪ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಉಪ್ಪಿ ಈ ಹೊಸ ಅವತಾರಕ್ಕೆ ಫಿದಾ ಆಗಿದ್ದಾರೆ.
ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಚಿತ್ರದ ಬಗ್ಗೆ ಮಾತನಾಡಿದ ಉಪೇಂದ್ರ, ಹೋಂ ಮಿನಿಸ್ಟರ್ ಚಿತ್ರದಲ್ಲಿ ನಾನು ಈವರೆಗೂ ಮಾಡಿರದ ಪಾತ್ರವನ್ನು ನಿರ್ವಹಿಸಿದ್ದೇನೆ. ಪಾತ್ರ ಒಪ್ಪಿಕೊಳ್ಳುವಾಗ ಅಳುಕಿದ್ದೆ. ನಿರ್ಮಾಪಕ ಪೂರ್ಣಚಂದ್ರ ನಾಯ್ದು ಅವರು ಸಿನಿಮಾ ಒಪ್ಪಿಕೊಳ್ಳುವಂತೆ ಮಾಡಿದ್ದರು. ಈ ಪಾತ್ರವನ್ನು ಸವಾಲಾಗಿ ತೆಗೆದುಕೊಂಡು ಅಭಿನಯಿಸಿದ್ದೇನೆ. ಚಿತ್ರ ಬಾಕ್ಸ್ ಆಫೀಸ್’ನಲ್ಲಿ ದಾಖಲೆ ಬರೆಯಲಿದೆ ಎಂಬ ಭರವಸೆಯಿದೆ ಎಂದಿದ್ದಾರೆ. ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಹೋಮ್ ಮಿನಿಸ್ಟರ್’ ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ನಾಯಕಿಯರಾಗಿ ವೇದಿಕಾ ಕಾಣಿಸಿಕೊಳ್ಳುತ್ತಿದ್ದು, ತಾನ್ಯಾಹೋಪ್, ಚಾಂದಿನಿ ಸುಮನ್ ರಂಗನಾಥ್, ಸಾಧು ಕೋಕಿಲ, ಅವಿನಾಶ್, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ಮಾಳವಿಕ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ