ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆಯೇ ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದೆ. ಯಶವಂತಪುರ, ವಿಜಯನಗರ, ಕುಮಾರಸ್ವಾಮಿ ಲೇಔಟ್, ಮಾದವಾರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ.
ತಮಿಳುನಾಡಿನ ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತದ ಹಿನ್ನೆಲೆ ರಾಜ್ಯದ ಹಲವಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.