ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆ ಕಾರ್ಯಾಚರಣೆಗೆ ಇಳಿದಿದ್ದು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.