ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಬಿಜೆಪಿ ಮೊದಲ ಜಯಗಳಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ದರ್ಶನ್‌ಕುಮಾರ್ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ನ ಚೌಧರಿ ಲಾಲ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಇನ್ನು ಉಧಂಪುರದಲ್ಲಿ ರಣಬೀರ್ ಸಿಂಗ್ ಗೆಲುವು ಸಾಧಿಸಿದ್ದಾರೆ.
ಆರ್ಟಿಕಲ್ 370 ರದ್ದಾದ ನಂತರ ಇಲ್ಲಿ ಮೊದಲ ಬಾರಿಗೆ ಚುನಾವಣೆಗಳು ನಡೆದಿವೆ, ಅಂದರೆ ಸುಮಾರು 10 ವರ್ಷಗಳ ನಂತರ ಇಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ.ಮೂರು ಸ್ಥಾನಗಳ ಫಲಿತಾಂಶಗಳು ಬಂದಿದ್ದು, ಅದರಲ್ಲಿ ಎನ್‌ಸಿ ಒಂದು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದೆ.