ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕಂಪನವು ಬೆಳಿಗ್ಗೆ 01:10 ಕ್ಕೆ 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಆಕಾಂಶ 27.51 N, ರೇಖಾಂಶ 92.12 E, ನಲ್ಲಿ ಸಂಭವಿಸಿದೆ ಎಂದು ತಿಳಿಸಿದೆ.
ಸದ್ಯ ಯಾವುದೇ ಸಾವುನೋವುಗಳು ಮತ್ತು ಹಾನಿಗಳ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.