ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ 2.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
NCS ಪ್ರಕಾರ, ಕಂಪನವು ಇಂದು ಮುಂಜಾನೆ 2:40 ರ ಸುಮಾರಿಗೆ ದಾಖಲಾಗಿದೆ ಮತ್ತು 25 ಕಿಮೀ ಆಳದಲ್ಲಿ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಕೇಂದ್ರೀಕೃತವಾಗಿತ್ತು ಎಂದು ವರದಿಯಾಗಿದೆ.
ಸದ್ಯ ಈ ಪ್ರದೇಶದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.