ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಬೆಳಿಗ್ಗೆ 9.18 ರ ಸುಮಾರಿಗೆ ಮಂಡಿಯಲ್ಲಿ 5 ಕಿಲೋಮೀಟರ್ ಆಳದಲ್ಲಿ ಕಂಪನದ ಅನುಭವವಾಗಿದೆ ಎನ್ನಲಾಗಿದೆ. ಪ್ರದೇಶದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ, ಆದರೆ ಸಾವುನೋವುಗಳು ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.