ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಕಂಪನವು ಸುಮಾರು 4.42 AM ನಲ್ಲಿ ದಾಖಲಾಗಿದೆ ಮತ್ತು 10 ಕಿಮೀ ಆಳದಲ್ಲಿ ಬಿಷ್ಣುಪುರ ಪ್ರದೇಶದ ಸುತ್ತಲೂ ಕೇಂದ್ರೀಕೃತವಾಗಿತ್ತು ಎಂದು ವರದಿಯಾಗಿದೆ.
ಭೂಕಂಪನದಿಂದಾಗಿ ಈ ಪ್ರದೇಶದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.