ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಕಚ್ ಜಿಲ್ಲೆಯಲ್ಲಿ 4.0 ತೀವ್ರತೆಯ ಕಂಪನ ಸಂಭವಿಸಿದೆ ಎಂದು NCS ತಿಳಿಸಿದೆ.
NCS ಪ್ರಕಾರ, ಕಂಪನವು 10 ಕಿಮೀ ಆಳದಲ್ಲಿ ಕಚ್ ಪ್ರದೇಶದ ಸುತ್ತಲೂ ಕೇಂದ್ರೀಕೃತವಾಗಿತ್ತು ಎನ್ನಲಾಗಿದೆ.
ಭೂಕಂಪನದಿಂದ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದಕ್ಕೂ ಮುನ್ನ ಶುಕ್ರವಾರವೂ ಗುಜರಾತ್‌ನ ಮೆಹ್ಸಾನ ಜಿಲ್ಲೆಯಲ್ಲಿ 4.2 ತೀವ್ರತೆಯ ಭೂಕಂಪ ದಾಖಲಾಗಿತ್ತು.